ಮಂಗಳೂರಿನ ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಯು.ಕೆ.ಜಿ. ವಿದ್ಯಾರ್ಥಿಗಳಿಗೆ ’ಗ್ರಾಜ್ಯುವೇಶನ್ ಡೇ’ ಆಚರಿಸಲಾಯಿತು.
ಕಾರ್ಯಕ್ರಮದ ಅಧಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ, ಸಂಜಿತ್ ನಾೖಕ್ ಮಾತನಾಡಿ ಮಕ್ಕಳಲ್ಲಿ ಮೌಲ್ಯಗಳು ಬರಬೇಕು. ಆದ್ದರಿಂದ ಚಿಕ್ಕವಯಸ್ಸಿನಿಂದಲೇ ನಾವು ಮಕ್ಕಳನ್ನು ಉತ್ತಮವಾದ ಸಂಸ್ಕಾರಯುತವಾದ ಶಿಕ್ಷಣವನ್ನು ನೀಡಿ ಬೆಳೆಸಬೇಕು ಎಂದು ಹೇಳಿದರು.
ವಿದ್ಯಾಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ. ಮಾತನಾಡಿ ಶಕ್ತಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸುತ್ತಿದೆ. ಕ್ರೀಡೆ, ವಿಜ್ಞಾನ ಮುಂತಾದ ವಿಷಯಗಳಲ್ಲಿ ನಮ್ಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ ಎಂದರು.
ಶಕ್ತಿ ಪೂರ್ವಪ್ರಾಥಮಿಕ ಶಾಲೆಯ ಸಂಯೋಜಕಿ ಪೆಟ್ರಿಶಿಯಾ ಪಿಂಟೋ ಸ್ವಾಗತಿಸಿದರು, ಶಿಕ್ಷಕಿ ರೇಖಾ ವಂದಿಸಿದರು. ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲ ರವಿಶಂಕರ ಹೆಗಡೆ ಉಪಸ್ಥಿತರಿದ್ದರು. ಶಿಕ್ಷಕಿ ಅಶ್ವಿನಿ ನಿರೂಪಿಸಿದರು.